
ಪ್ರಗತಿವಾಹಿನಿ ಸುದ್ದಿ: ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತು ಕೆ.ಎಸ್.ಆರ‍್.ಟಿ.ಸಿ ಬಸ್ ಚಾಲಕರೊಬ್ಬರು ಡಿಪೋದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಬೇಲೂರು ಪಟ್ಟಣದ ಡಿಪೋದಲ್ಲಿ ಈ ಘಟನೆ ನಡೆದಿದೆ. ಡಿಪೋ ಮ್ಯಾನೇಜರ್ ಶಾಜಿಯಾ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬಸ್ ಚಾಲಕ ಹರೀಶ್ ಎಂಬುವವರು ಡಿಪೋದ ವಿಶ್ರಾಂತಿ ಕೊಠಡಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಸ್ವಸ್ಥಗೊಂಡಿರುವ ಹರೀಶ್ ಅವರನ್ನು ಬೇಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.