Kannada NewsKarnataka NewsLatest

*KSRTC ಬುಸ್ ಟೈರ್ ಸ್ಫೋಟ: ಹತ್ತಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಟೈರ್ ಸ್ಫೋಟಗೊಂಡು ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಬಳಿ ಈ ಘಟನೆ ನಡೆದಿದೆ. ಬಸ್ ಬೆಂಗಳುರಿನಿಂದ ಹೆಡಿಯಾಲ ಮಾರ್ಗವಾಗಿ ತೆರಳುತ್ತಿತ್ತು. ಈ ವೇಳೆ ಏಕಾಏಕಿ ಬಸ್ ಟೈರ್ ಸ್ಫೋಟಗೊಂಡಿದೆ.

ಪರಿಣಾಮ ಬಸ್ ಒಳಗೆ ಕುಳಿತಿದ್ದ ಹತ್ತು ಜನರು ಗಂಭೀರವಾಗಿ ಗಯಗೊಂಡಿದ್ದಾರೆ. ಅದರಲ್ಲಿಯೂ ಶಾಯುದಾಬಾನು ಎಂಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಜರಿಗೆ ಹಾಕುವ ಬಸ್ ನ್ನು ರಸ್ತೆಗೆ ಇಳಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button