ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ರಾಗಿ ಮುದ್ದನಹಳ್ಳಿ ಗೇಟ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ ಏಕಾಏಕಿ ಹಳ್ಳಕ್ಕೆ ಬಿದ್ದಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಯಾಣಿಕರನ್ನು ರಕ್ಷಿಸಲಾಗಿದೆ.
ಗಾಯಾಳು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ ಐ ಅಪಘಾತ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ