Latest

ಹಳ್ಳಕ್ಕೆ ಉರುಳಿದ KSRTC ಬಸ್; ಮೂವರ ಸ್ಥಿತಿ ಗಂಭೀರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆ ಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ 15 ಜನರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅತ್ತಿವಟ್ಟ ಬಳಿ ನಡೆದಿದೆ.

ಕೋಲಾರ ಹೊಸಕೋಟೆ ಹೆದ್ದಾರಿಯ ಅತ್ತಿವಟ್ಟ ಬಳಿ ಈ ಅವಘಡ ಸಂಭವಿಸಿದ್ದು, ಕೆ ಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಅತಿವೇಗವೇ ಘಟನೆಗೆ ಕಾರಣ ಎನ್ನಲಾಗಿದೆ.

Home add -Advt

ಅಪಘಾತದ ರಭಸಕ್ಕೆ ಬಸ್ ನಲ್ಲಿದ್ದ 15 ಜನರು ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೊಸ ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ

https://pragati.taskdun.com/bjp-janasankalapa-samaveshachikkamagaluruc-t-ravicontroversy-statmentsiddaramaiah/

Related Articles

Back to top button