
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಕರ್ ಅನುಶ್ರೀ ಹೆಸರು ಮತ್ತೆ ಕೇಳಿಬಂದಿದ್ದು, ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಕೂಡ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧಿತ ಡಾನ್ಸರ್ ಕಿಶೋರ್ ಶೆಟ್ಟಿ ನೀಡಿರುವ ಹೇಳಿಕೆ ಪ್ರಕಾರ ಆಂಕರ್ ಅನುಶ್ರೀ ಡ್ರಗ್ಸ್ ಸೇವನೆ ಜೊತೆಗೆ ಸಾಗಾಟ ಕೂಡ ಮಾಡುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ.
ಅನುಶ್ರೀ ಕಿಶೋರ್ ಹಾಗೂ ತರುಣ್ ಜೊತೆ ಸಾಕಷ್ಟು ಬಾರಿ ಡ್ರಗ್ಸ್ ಸೇವನೆ ಮಾಡಿದ್ದಾರೆ. ಅವರಿಗೆ ಡ್ರಗ್ಸ್ ಪೆಡ್ಲರ್ ಗಳ ಪರಿಚಯ ಕೂಡ ಚೆನ್ನಾಗಿದೆ ಎಂದು ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿದೆ.