
ಪ್ರಗತಿವಾಹಿನಿ ಸುದ್ದಿ; ರಾಯಚೂರು: ಶಾಲಾ ವಿದ್ಯಾರ್ಥಿಗಳನ್ನು ಕರೆದುಕೊಂಡು ಪ್ರವಾಸಕ್ಕೆ ತೆರಳಿದ್ದ ಕೆ ಎಸ್ ಆರ್ ಟಿ ಸಿ ಬಸ್ ಅಪಘಾತಕ್ಕೀಡಾಗಿದ್ದು, ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿರುವ ಘಟನೆ ಹಾವೇರಿ ಜಿಲ್ಲೆಯ ಅಲ್ಲಿಪೂರ ಕ್ರಾಸ್ ಬಳಿ ನಡೆದಿದೆ.
ರಾಯಚೂರಿನ ಲಿಂಗಸಗೂರು ತಾಲೂಕಿನ ಸಜ್ಜನಗುಡ್ಡ ಸರ್ಕಾರಿ ಶಾಲೆಯ 45 ಮಕ್ಕಳನ್ನು ಬಸ್ ನಲ್ಲಿ ಪ್ರವಾಸಕ್ಕೆ ಕರೆದೊಯ್ಯಲಾಗುತ್ತಿತ್ತು. ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸವಣೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.