ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಕೆ ಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಇಲ್ಲಿನ ಮುರುಕನಹಳ್ಳಿ ಬಳಿ ಬರುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಹೊಡೆದು ರಸೆ ಪಕ್ಕದಲ್ಲಿ ಉರುಳಿ ಬಿದ್ದಿದೆ. ಬಸ್ ನಲ್ಲಿ 32 ಪ್ರಯಾಣಿಕರು ಇದ್ದರು.
ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕೆ ಆರ್ ಪೇಟೆ ತಾಲುಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ ಆರ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಹೈಸ್ಕೂಲ್ ವಿದ್ಯಾರ್ಥಿ*
https://pragati.taskdun.com/9th-studentsuicidekolara/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ