
ಪ್ರಗತಿವಾಹಿನಿ ಸುದ್ದಿ; ಶಿರಸಿ: ಕೆ ಎಸ್ ಆರ್ ಟಿಸಿ ಬಸ್ ಸ್ಟೇರಿಂಗ್ ತುಂಡಾದ ಪರಿಣಾಮ ಬಸ್ ಕಂದಕಕ್ಕೆ ಉರುಳಿಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ 16ನೇ ಮೈಲಿಕಲ್ ಬಳಿ ನಡೆದಿದೆ.
ಹಳಿಯಾಳದಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್ ತಿರುವಿನಲ್ಲಿ ಸ್ಟೇರಿಂಗ್ ಕಟ್ ಆಗಿದ್ದು, ಬಸ್ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ನಲ್ಲಿ 47 ಜನ ಪ್ರಯಾಣಿಕರಿದ್ದರು.
ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ.