Karnataka News

*KSRTC ಬಸ್-ಟಾಟಾ ಏಸ್ ಅಪಘಾತ: ಇಬ್ಬರು ಮಹಿಳೆಯರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲುಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಟಾಟಾ ಏಸ್ ನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

Related Articles

Back to top button