Belagavi NewsBelgaum NewsKannada NewsKarnataka NewsLatestUncategorized

*ಜೈನಮುನಿ ಹತ್ಯೆ ಪ್ರಕರಣ; CIDಗೆ ಹಸ್ತಾಂತರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ನಂದಿಪರ್ವತ ಆಶ್ರಮದ ಜೈನಮಿನಿ ಕಾಮಕುಮಾರ ನಂದಿ ಮಹಾರಜರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.

ಜೈನಮುನಿಯನ್ನು ಹತ್ಯೆ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಯಾಗಬೇಕಿದೆ. ಸಾರ್ವಜನಿಕರ ಒತ್ತಾಯದ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದರು.

ಜೈನಮುನಿ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬೆಳಗಾವಿ ಪೊಲೀಸರಿಂದ ತನಿಖೆ ಮುಂದುವರೆದಿದೆ. ಪ್ರಕರಣದಲ್ಲಿ ಇನ್ನಷ್ಟು ತನಿಖೆ ನಿಟ್ಟಿನಲ್ಲಿ ಸಿಐಡಿಗೆ ಹಸ್ತಾಂತರಿಸಲಾಗಿದೆ.

Home add -Advt

Related Articles

Back to top button