
ಪ್ರಗತಿವಾಹಿನಿ ಸುದ್ದಿ; ತುಮಕೂರು: ಕೆ ಎಸ್ ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಹೊಸಹಳ್ಳಿ ಬಳಿ ಸಂಭವಿಸಿದೆ.
ತುಮಕೂರಿನಿಂದ ಕೊರಟಗೆರೆ ಕಡೆಗೆ ಹೋಗುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ಹಾಗೂ ಕೊರತಗೆರೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಆಟೋ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ 12 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಖ್ಯಾತ ನಟಿ ಮೃತದೇಹ
ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣದ ಮೂಲಕ ಬದಲಾವಣೆ ಸಾಧ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ