Kannada NewsKarnataka NewsLatest

*KSRTC ಬಸ್-ಆಟೋ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೋಡಿಗೇನಹಳ್ಳಿ ಸಮೀಪದ ಜಯಮಂಗಲಿ ಬ್ರಿಡ್ಜ್ ಬಳಿ ಈ ದುರಂತ ಸಂಭವಿಸಿದೆ. ಆಟೋದಲ್ಲಿ ಗೌರಿಬಿದನೂರಿನ ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳೆಯರು ತೆರಳುತ್ತಿದ್ದರು. ಈ ವೇಳೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ.

ಆಟೋದಲ್ಲಿದ್ದ ಮಹಿಳೆ ಜೋಗೇನಹಳ್ಳಿ ಗ್ರಾಮದ 33 ವರ್ಷದ ಲಕ್ಷ್ಮೀ ದೇವಿ ಸಾವನ್ನಪ್ಪಿದ್ದಾರೆ. 9 ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಮಧುಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಡಿಗೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button