ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷದ ಮುನ್ನಾ ದಿನವೇ ಭೀಕರ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ನಡೆದಿದೆ.
ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೌರೀಶ್ ನಾಯ್ಕ್ (25), ರಮೇಶ್ ನಾಯ್ಕ್ (22) ಹಾಗೂ ರಾಘವೇಂದ್ರ ಸೋಮಯ್ಯ (34) ಮೃತ ದುರ್ದೈವಿಗಳು.
ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ