ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಸರ್ಕಾರಿ ಬಸ್ ಕುರಿಗಾಹಿ ಮೇಲೆ ಹರಿದು, ಕುರಿಗಾಹಿ ಹಾಗೂ 20 ಕುರಿಗಳು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಕಲಬುರ್ಗಿಯ ಕಮಲಾಪುರ ತಾಲೂಕಿನ ಬೆಂಗಳುರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಕಲಬುರ್ಗಿಯಿಂದ ಹುಮನಾದಾಬ್ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್, ಬೈಕ್ ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಕಮಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ