
ಪ್ರಗತಿವಾಹಿನಿ ಸುದ್ದಿ: ಸಾಲು ಸಾಲು ಅಪಘಾತ ಪ್ರಕರಣಗಳು ಸಂಭವಿಸುತ್ತಿದ್ದು, ತಮಿಳುನಾಡಿನಲ್ಲಿ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ರಾಮನಗರದಲ್ಲಿಯೂ ಮತ್ತೊಂದು ಅಪಘಾತ ಸಂಭವಿಸಿದ್ದು, ತಂದೆ ಹಾಗೂ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ರಾಮನಗರದ ಅಚ್ಚಲು ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಬೈಕ್ ನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ತೆರಳುತ್ತಿದ್ದರು. ಈ ವೇಳೆ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದ್ದು, ತಡೆ ಹಾಗೂ ಮಗ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ