
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಬಾಗ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬ್ಯಾಕೂರ್ ಗ್ರಾಮದ ನಿವಾಸಿ ಲಕ್ಕಪ್ಪ ಪಿಡ್ಡಿ (34) ಮೃತ ದುರ್ದೈವಿ. ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ