Karnataka News

*ಬಸ್-ಬೈಕ್ ಭೀಕರ ಅಪಘಾತ: ಸಬ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಕೆ.ಎಸ್.ಆರ್.ಟಿ.ಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾಗಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಸಬ್ ಇನ್ಸ್ ಪೆಕ್ಟರ್ ಓರ್ವರು ಸಾವನ್ನಪ್ಪಿದ್ದಾರೆ.

ನಾಗರಾಜ್ ಮೃತ ಸಬ್ ಇನ್ಸ್ ಪೆಕ್ಟರ್. ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಬಳಿ ಈ ಅಪಘಾತ ಸಂಭವಿಸಿದೆ.

ನಾಗರಾಜ್ ಬೈಕ್ ನಲ್ಲಿ ತೆರಳುತ್ತಿದ್ದರು. ಎದುರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನಾಗರಾಜ್ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಕಗ್ಗಲೀಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button