
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ರಸ್ತೆ ಗುಂಡಿಗಳು ಜವರಾಯನಂತೆ ಬಾಯ್ತೆರೆದು ನಿಂತಿವೆ. ಒಂದೆಡೆ ಮಳೆ ಅಬ್ಬರ, ಇನ್ನೊಂದೆಡೆ ರಸ್ತೆಗಳೆಲ್ಲ ಗುಂಡಿಮಯ, ನದಿಯಂತೆ ರಸ್ತೆಗಳ ಮೇಲೆ ಹರಿಯುತ್ತಿರುವ ಚರಂಡಿ ನೀರು. ಇದು ಬೆಂಗಳೂರು ನಗರದ ದುಸ್ಥಿತಿ. ರಸ್ತೆ ಗುಂಡಿಯನ್ನು ತಪ್ಪಿಸಲು ಹೋದ ಮಹಿಳೆಯ ಮೇಲೆಯೇ ಕೆ ಎಸ್ ಆರ್ ಟಿಸಿ ಬಸ್ ಹರಿದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೋಂಡಾ ಆಕ್ಟೀವಾಗೆ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಮಹಿಳೆ ಮೇಲೆಯೇ ಬಸ್ ಹರಿದಿದೆ. ಮಹಿಳೆ ಉಮಾದೇವಿ ಗಂಭೀರವಾಗಿ ಗಾಯಗೊಂಡಿದ್ದು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೋಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕೆಳಗೆ ಬಿದ್ದ ಮಹಿಳೆ ಮೇಲೆಯೇ ಬಸ್ ಹರಿದಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದ್ದು, ಕೆ ಎಸ್ ಆರ್ ಟಿಸಿ ಬಸ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು.
ಸಮಯಪ್ರಜ್ಞೆ, ಸ್ಥಿತಪ್ರಜ್ಞತೆಯಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ
https://pragati.taskdun.com/politics/cm-basavaraj-bommaidcceomeeting/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ