National

*KSRTC ಬಸ್ – ಕ್ಯಾಂಟರ್ ಭೀಕರ ಅಪಘಾತ: ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ರಾಣಿಪೇಟ ಬಳಿ ನಡೆದಿದೆ.

ಬಸ್ ಹಾಗೂ ಕ್ಯಾಂಟರ್ ನಡುವೆ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕ ಹಾಗೂ ಕ್ಯಾಂಟರ್ ನಲ್ಲಿದ್ದ ನಾಲ್ವರು ಸೇರಿ ಒಟ್ಟು ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವೇಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button