Latest

*KSRTC ಬಸ್-ಕಾರು ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಅಂಕೋಲಾ: ನ್ಯೂ ಇಯರ್ ಪಾರ್ಟಿ ಮುಗಿಸಿ ತೆರಳುತ್ತಿದ್ದಾಗ ಭೀಕರ ದುರಂತವೊಂದು ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿಯಲ್ಲಿ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ತಮಿಳುನಾಡು ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಅಪಘಾತ ಸಂಭವಿಸಿದೆ.

Home add -Advt

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಂಕೋಲಾ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

*ಪ್ರತಿಭಟನೆ ನಡೆಸಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ; ಓರ್ವ ವಿದ್ಯಾರ್ಥಿನಿ ಸಾವು*

https://pragati.taskdun.com/belagavicar-accidentstudent-deathprotest/

Related Articles

Back to top button