
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಹೊರವಲಯದ ನೆಲಮಂಗಲದ ಜಿಂದಾಲ್ ಬಳಿ ಈ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರು ಡಿವೈಡರ್ ಹಾರಿ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ನ ಗಾಜುಗಳು ಒಡೆದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ನಲ್ಲಿ 43 ಪ್ರಯಾಣಿಕರಿದ್ದರು. ಅಪಘಾತವಾದಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.
ಬಸ್ ಅಪಘಾತಕ್ಕೀಡಾದ ಪರಿಣಾಮ ಪ್ರಯಾಣಿಕರಿಗೆ ಬೇರೆ ಬಸ್ ಗಳಲ್ಲಿ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



