Kannada NewsKarnataka NewsLatest

*ಬಸ್-ಕಾರು ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್​​ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯದ ನೆಲಮಂಗಲದ ಜಿಂದಾಲ್ ಬಳಿ ಈ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರು ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್‌ನ ಗಾಜುಗಳು ಒಡೆದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿ 43 ಪ್ರಯಾಣಿಕರಿದ್ದರು. ಅಪಘಾತವಾದಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

Home add -Advt

ಬಸ್ ಅಪಘಾತಕ್ಕೀಡಾದ ಪರಿಣಾಮ ಪ್ರಯಾಣಿಕರಿಗೆ ಬೇರೆ ಬಸ್ ಗಳಲ್ಲಿ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button