Cancer Hospital 2
Laxmi Tai Society2
Beereshwara add32

*KSRTC ಬಸ್-ಕಾರು ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ ಏರಿಕೆ; ಐವರು ದುರ್ಮರಣ*

Anvekar 3

ಪ್ರಗತಿವಾಹಿನಿ ಸುದ್ದಿ; ಶಿರಸಿ: ಕೆ.ಎಸ್.ಆರ್.ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೃತರು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಕೆ.ಎಸ್.ಆರ್.ಟಿ.ಸಿ ಬಸ್ ಭಟ್ಕಳಕ್ಕೆ ತೆರಳುತ್ತಿತ್ತು. ಈ ವೇಳೆ ಬಂಡಲ್ ಬಳಿ ಈ ಅಪಘಾತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Emergency Service

ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Gokak Jyotishi add 8-2
Bottom Add3
Bottom Ad 2

You cannot copy content of this page