Kannada NewsKarnataka NewsLatest

*KSRTC ಬಸ್-ಕಾರು ಭೀಕರ ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಕೆಮ್ಮಾಳೆ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರು ಬೆಂಗಳೂರು ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಕ್ರೇನ್ ಸಹಾಯದಿಂದ ಗಾಯಾಳುಗಳ ರಕ್ಷಣಾ ಕಾರ್ಯಾಚರಣೆ ನಡೆದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button