Kannada NewsKarnataka NewsLatest

KSRTC ಬಸ್ ಕಾರು ಮುಖಾಮುಖಿ ಡಿಕ್ಕಿ; 9 ಜನರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಬಿಲ್ಲೇನಹಳ್ಳಿ ಬಳಿ ಬಸ್ ಹಾಗೂ ಕಾರು ಅಪಘಾತಕ್ಕೀಡಾಗಿದ್ದು, 9 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ದಾಖಲಿಸಲಾಗಿದೆ.

ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button