KSRTC ಬಸ್ ಕಾರು ಮುಖಾಮುಖಿ ಡಿಕ್ಕಿ; 9 ಜನರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬಿಲ್ಲೇನಹಳ್ಳಿ ಬಳಿ ಬಸ್ ಹಾಗೂ ಕಾರು ಅಪಘಾತಕ್ಕೀಡಾಗಿದ್ದು, 9 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ದಾಖಲಿಸಲಾಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಬರ ಘೋಷಣೆಗೆ ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ; ಮಾಜಿ ಸಿಎಂ … Continue reading KSRTC ಬಸ್ ಕಾರು ಮುಖಾಮುಖಿ ಡಿಕ್ಕಿ; 9 ಜನರಿಗೆ ಗಾಯ