Karnataka News

*KSRTC ಬಸ್-ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡಿವೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಇಲ್ಲಿನ ಕೆ.ಆರ್.ನಗರ ತಾಲೂಕಿನ ಮಂಚನಹಳ್ಳಿಯಲ್ಲಿ ಈ ಅಪಘತ ಸಂಭವಿಸಿದೆ. ಸುನೀಲ್ (34) ಮೃತ ಕಾರು ಚಾಲಕ. ಕಾರಿನಲ್ಲಿದ್ದ ಇನ್ನೋರ್ವ ರಮೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕೆ.ಆರ್.ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆ.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button