Latest

KSRTC ಬಸ್-ಕಾರು ಡಿಕ್ಕಿ; ಇಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಬೆಳ್ಳಂ ಬೆಳಿಗ್ಗೆ ಕೆ ಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಬ್ಬವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪಘಾತ ಸಂಭವಿಸಿದ್ದು, ಗಿರೀಶ್ (37), ಮಾನ್ಯ (17) ಮೃತರು. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button