Latest

ಕೆ.ಎಸ್.ಆರ್.ಟಿ.ಸಿ ಬಸ್-ಕಾರು-ಲಾರಿ ಭೀಕರ ಅಪಘಾತ; ನಾಲ್ವರು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ.

ಮೊದಲು ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಎದುರಿನಿಂದ ಬಂದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ಅಪಘಾತವಾಗಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದಲ್ಲಿ ಮೃತಪಟ್ಟವರನ್ನು ಕಾರು ಚಾಲಕ ಸುನೀಲ್ (30), ಸುಮಾ(40), ದಾಕ್ಷಾಯಿಣಿ (40) ಹಾಗೂ ಶಾರದಮ್ಮ (62) ಎಂದು ಗುರುತಿಸಲಾಗಿದೆ.

ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆಲಸದ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆ; ಮಹಿಳೆ ಸೇರಿ ಮೂವರು ಅರೆಸ್ಟ್

Related Articles

Back to top button