Kannada NewsKarnataka NewsLatest

*ಚಲಿಸುತ್ತಿದ್ದ ಬಸ್ ನಿಂದ ಕೆಳಗೆ ಬಿದ್ದು ಕಂಡಕ್ಟರ್ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದ ನಿರ್ವಹಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಲ್ಲನಮೂಲೆಮಠದ ಬಳಿ ನಡೆದಿದೆ.

ಮಹದೇವಸ್ವಾಮಿ (35) ಮೃತ ಕಂಡಕ್ಟರ್. ಕೆ.ಎಸ್.ಆರ್.ಟಿ.ಸಿ ಬಸ್ ಕಂದಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬಸ್ ನ ಫುಟ್ ಬೋರ್ಡ್ ಮೇಲೆ ನಿಂತಿದ್ದ ಮಹದೇವಸ್ವಾಮಿ, ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button