ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸಿದ್ದ ಇಬ್ಬರು ಪ್ರಯಾಣಿಕರಿಗೆ ಕೊರೊನಾ ದೃಢ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಬೆಂಗಳೂರಿನಿಂದ ದಾವಣಗೆರೆ ಮತ್ತು ಮಂಗಳೂರಿಗೆ ಪ್ರಯಾಣಿಸಿದ್ದ ಇಬ್ಬರು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ.

ಮಾ. 18ರಂದು KA 57 F 3802 ಬಸ್ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ದಾವಣಗೆರೆಗೆ ಹೊರಟಿತ್ತು. ಈ ಬಸ್​ನಲ್ಲಿ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಟಿದ್ದ ಪ್ರಯಾಣಿಕನಿಗೆ ಕೊರೋನಾ ಸೋಂಕು ತಗುಲಿದೆ.

ಇನ್ನು ಮಾ. 21ರಂದು KA 19 F 3329 ಬಸ್​ನಲ್ಲಿ ಸಂಜೆ 4.30ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಹೊರಟಿದ್ದ ಪ್ರಯಾಣಿಕನಿಗೂ ಸೋಂಕು ದೃಢಪಟ್ಟಿದೆ. ಈ ಎರಡು ಬಸ್​ಗಳಲ್ಲಿ ಪ್ರಯಾಣಿಸಿದವರು ಕೂಡಲೇ ಹತ್ತಿರದ ಜಿಲ್ಲಾಸ್ಪತ್ರೆಗೆ ತೆರಳಿ, ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವಂತೆ ಸಾರಿಗೆ ನಿಗಮ ಸೂಚನೆ ನೀಡಿದೆ.

ಈ ಕುರಿತು ಕೆ ಎಸ್ ಆರ್ ಟಿಸಿ ತನ್ನ ಟ್ವಿಟರ್ ಖಾತೆಯಲ್ಲಿಯೂ ಕೂಡ ಪ್ರಕಟಿಸಿದ್ದು, ಈ ಬಸ್ ಗಳಲ್ಲಿ ಪ್ರಯಾಣಿಸಿದ ಪ್ರಯಾಣಿಕರೆಲ್ಲರೂ ಮುಂಜಾಗೃತಾ ಕ್ರಮವಾಗಿ ತಪಾಅಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button