ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುಗಾದಿ ಹಬ್ಬಕ್ಕೆ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಸಿಬ್ಬಂದಿ ಬಿಗ್ ಶಾಕ್ ನೀಡಿದ್ದಾರೆ. ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹಿಸಿ ಕೆ ಎಸ್ ಆರ್ ಟಿಸಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಮಾರ್ಚ್ 21ರಿಂದ ಕೆ ಎಸ್ ಆರ್ ಟಿಸಿ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನಾಲ್ಕು ನಿಗಮದ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದ 23,000 ಬಸ್ ಗಳು ರಸ್ತೆಗಿಳಿಯುವುದಿಲ್ಲ ಎಂದು ಸಾರಿಗೆ ನೌಕರರ ಸಂಘ ತಿಳಿಸಿದೆ.
ಯುಗಾದಿ ಹಬ್ಬಕ್ಕೆ ಊರಿಗೆ ಹೋಗಲು ಸಿದ್ಧತೆ ನಡೆಸಿರುವ ಪ್ರಯಾಣಿಕರಿಗೆ ಬಸ್ ಸಂಚಾರ ಸಮಸ್ಯೆಯಾಗುವ ಸಾಧ್ಯತೆ ಇದೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆ ಎಸ್ ಆರ್ ಟಿಸಿ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈಗಾಗಲೇ ಸಾರಿಗೆ ಸಚಿವ ಶ್ರೀರಾಮುಲು ಒಂದು ಸುತ್ತಿನ ಮಾತುಕತೆ ನಡೆಸಿದ್ದು ಶೇ.10ರಷ್ಟು ವೇತನ ಹೆಚ್ಚಳ ಭರವಸೆ ನೀಡಿದ್ದಾರೆ ಆದರೆ ಸಾರಿಗೆ ನೌಕರರು ಇದಕ್ಕೆ ಒಪ್ಪದೇ ಮುಷ್ಕರದ ನಿರ್ಧಾರ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ