
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿ ರಂಗನ ಬೆಟ್ಟದ ಮಾರ್ಗದಲ್ಲಿ ನಡೆದಿದೆ.
ಯಳಂದೂರಿನಿಂದ ಬಿಳಿಗಿರಿ ರಂಗನ ಬೆಟ್ಟಕ್ಕೆ ಹೊರಟಿದ್ದ ಸರ್ಕಾರಿ ಬಸ್ ನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಸ್ ಚಾಲಕ ಬಸ್ ನಿಲ್ಲಿಸಿ, ಪ್ರಯಾಣಿಕರನ್ನು ಕೆಳಗಿಳಿಯಲು ಸೂಚಿಸಿದ್ದಾರೆ.
ಬಸ್ ನಲ್ಲಿ 50 ಪ್ರಯಾಣಿಕರು ಇದ್ದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.