
ಪ್ರಗತಿವಾಹಿನಿ ಸುದ್ದಿ: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಮಾಹಿತಿ ನೀಡಿದ್ದಾರೆ.
ನಾಳೆ ಫೆಬ್ರವರಿ 16ರಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್‌ಗೆ ನೂತನ ಪರಿಷ್ಕ್ರತ ದರ ಜಾರಿಗೆಯಾಗಲಿದೆ ಎಂದು ತಿಳಿಸಿದ್ದಾರೆ.
ಡಿಸೇಲ್, ಸಿಬ್ಬಂದಿ ಹಾಗೂ ಇತರೆ ಖರ್ಚುಗಳ ಹಿನ್ನೆಲೆ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಮೊದಲು 2021ರಲ್ಲಿ ಲಗೇಜ್ ದರ ಏರಿಕೆಯಾಗಿತ್ತು. ಅದಾದ ಬಳಿಕ ಟಿಕೆಟ್ ದರ ಪರಿಷ್ಕ್ರರಣೆ ಆದಾಗ ಲಗೇಜ್ ದರ ಏರಿಕೆಯಾಗಿರಲಿಲ್ಲ. ಹೀಗಾಗಿ ಲಗೇಜ್ ದರ ಹೆಚ್ಚಳ ಮಾಡಲಾಗಿದೆ.
1 ರಿಂದ 5 ಸ್ಟೇಜ್ ವರೆಗೆ 6 ರೂಪಾಯಿ
6 ರಿಂದ 12 ಸ್ಟೇಜ್ ವರೆಗೆ 12 ರೂಪಾಯಿ
156 ರಿಂದ 160 ಸ್ಟೇಜ್ ವರೆಗೆ 145 ರೂಪಾಯಿ ಏರಿಕೆ ಮಾಡಲಾಗಿದೆ.




