ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ.
ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬಸ್ ನ ಮುಂಭಾಗ ಸಂಪೂರ್ನ ನುಜ್ಜುಗುಜ್ಜಾಗಿದೆ. ಬಸ್ ನಲ್ಲಿದ್ದ 14 ಪ್ರಯಾಣಿಕರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನಾಹೊಸಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನಿದಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ