ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ವರ್ಷದ ಬೆಳಗಾವಿ ಅಧಿವೇಶನದ ಆರಂಭದ ದಿನದಿಂದಲೂ ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುವರ್ಣ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಸುತ್ತಿರುವ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ವಿಭಾಗಗಳ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ7ನೇ ವೇತನ ಆಯೋಗದ ಮಾದರಿಯಲ್ಲಿ ವೇತನ ನೀಡಬೇಕು. ವಜಾಗೊಳಿಸಿರುವ ನೌಕರರನ್ನು ಪುನಃ ನೇಮಕ ಮಾಡಿಕೊಳ್ಳಬೇಕು ಮೊದಲಾದ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಾರಿಗೆ ಸಂಸ್ಥೆ ನೌಕರರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಇದರಲ್ಲಿ ಕೆಲ ನೌಕರರು ಸರದಿ ಪ್ರಕಾರ ಉಪವಾಸ ಸತ್ಯಾಗ್ರಹವನ್ನೂ ನಡೆಸುತ್ತಿದ್ದಾರೆ. ಇಬ್ಬರು ಮಹಿಳಾ ನೌಕರರು ಸೇರಿದಂತೆ 5ಕ್ಕೂ ಹೆಚ್ಚು ಉಪವಾಸ ನಿರತ ನೌಕರರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಉಪವಾಸ ನಿರತ 14ಕ್ಕೂ ಹೆಚ್ಚು ನೌಕರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ತಮ್ಮನ್ನು ವಶಕ್ಕೆ ಪಡೆದು, ವಾಹನದಲ್ಲಿ ಹುಬ್ಬಳ್ಳಿ ಮಾರ್ಗದಲ್ಲಿ ಕರೆದೊಯ್ಯುತ್ತಿದ್ದಾರೆ ಎಂದು ಆರೋಪಿಸಿ ನೌಕರರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಸಂಘದ ಕಾರ್ಯದರ್ಶಿ ಅನೀಲ್‍ಕುಮಾರ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಪೊಲೀಸರು ಬಂಧಿಸಿದರೂ ಅಲ್ಲೂ ಉಪವಾಸ ಸತ್ಯಾಗ್ರಹ ಮುಂದುವರಿಸುವುದಾಗಿ ನೌಕರರು ತಿಳಿಸಿದ್ದಾರೆ.
*ರೈಲಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ*
https://pragati.taskdun.com/lovers-commited-sucide-in-telangana/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ