Karnataka News

ಕಾರ್ಮಿಕರಿಗೆ ಹೊಸ ಬಸ್ ಪಾಸ್ 

ಪ್ರಗತಿ ವಾಹಿನಿ ಸುದ್ದಿ, ಹುಬ್ಬಳ್ಳಿ:   ಈಗಾಗಲೇ ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಸೆಪ್ಟೆಂಬರ್-2022 ರಿಂದ ಪ್ರಾರಂಭಿಸಲಾಗಿದೆ.
ಸೆಪ್ಟೆಂಬರ್ ನಲ್ಲಿ ನೀಡಿದ್ದ ಪಾಸುಗಳ ಅವಧಿಯು ಡಿಸೆಂಬರ್-2022 ಅಂತ್ಯಕ್ಕೆ   ಮುಕ್ತಾಯಗೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ದಿನಾಂಕ: 23.12.2022 ರಿಂದ ಮೂರು ತಿಂಗಳ ಅವಧಿಗಾಗಿ ಹೊಸ ಬಸ್ ಪಾಸುಗಳ ವಿತರಣಾ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.
ಆದ್ದರಿಂದ ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ, “ನೋಂದಾಯಿತ ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯ ನೋಂದಾಯಿತ ಗುರುತಿನ ಚೀಟಿ/ಮಾಹಿತಿಯೊಂದಿಗೆ ಸ್ಥಳಿಯ ಗ್ರಾಮ-1 ಅಥವಾ ಕರ್ನಾಟಕ-1 ಕೇಂದ್ರವನ್ನು ಸಂಪರ್ಕಿಸಿ ಹೊಸ  ಬಸ್ ಪಾಸ್ ಸೌಲಭ್ಯವನ್ನು ಪಡೆದು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಕಾರ್ಮಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://pragati.taskdun.com/karnataka-budgetfebruarycm-basavaraj-bommaishiggavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button