Kannada NewsKarnataka NewsNational

*ಕೆಎಸ್‌ಆರ್‌ಟಿಸಿಆಯುಧ ಪೂಜೆಗೆ ಹಣ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ದಸರಾ ಸಂದರ್ಭ ಆಯುಧ ಪೂಜೆಗೆ ಕೆಎಸ್‌ಆರ್‌ಟಿಸಿ ಪ್ರತಿ ವರ್ಷ ಬಸ್‌ಗಳ ಪೂಜೆಗೆ ಹಣ ಬಿಡುಗಡೆ ಮಾಡುತ್ತದೆ. ಈ ವರ್ಷ ಪ್ರತಿ ಬಸ್‌ಗೆ ಕೆಎಸ್‌ಆರ್‌ಟಿಸಿ ಕೇವಲ 100 ರೂ. ಬಿಡುಗಡೆ ಮಾಡಿತ್ತು. ಆದರೆ ಈ ಹಣ ಬಸ್‌ಗೆ ಅಲಂಕಾರ ಮಾಡಲೂ ಸಾಕಾಗುವುದಿಲ್ಲ ಎಂದು ಚಾಲಕರು ಹಾಗೂ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಕೆಎಸ್‌ಆರ್‌ಟಿಸಿ ದೊಡ್ಡ ಮನಸ್ಸು ಮಾಡಿ ಪೂಜೆಗೆ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಿದೆ.

ಕೆ ಎಸ್ ಆರ್ ಟಿ ಸಿ ಸಂಸ್ಥೆಯಲ್ಲಿ ಆಯುಧಪೂಜೆಗೆ ರೂ.100 ನೀಡುತ್ತಿರುವುದನ್ನು‌ ರೂ.250 ಕ್ಕೆ ಹೆಚ್ಚಿಸಲಾಗಿದೆ. ಒಂದು ಘಟಕದಲ್ಲಿ ಸರಿ ಸುಮಾರು 100 ರಿಂದ 500 ಬಸ್ಸುಗಳಿರುತ್ತವೆ. ಒಂದು ಬಸ್ಸಿಗೆ ರೂ. 100 ಎಂದು ಒಂದು ಘಟಕಕ್ಕೆ / ಕಾರ್ಯಾಗಾರಕ್ಕೆ ನೀಡಲಾಗುತ್ತದೆ.  2008 ರವರೆಗೂ ರೂ.10 ಪ್ರತಿ‌ ಬಸ್ಸಿಗೆ , 2009 ರಲ್ಲಿ ಪ್ರತಿ ಬಸ್ಸಿಗೆ ರೂ 30 ಕ್ಕೆ ಏರಿಕೆ ಮಾಡಲಾಯಿತು. 2016 ರಲ್ಲಿ ಪ್ರತಿ ಬಸ್ಸಿಗೆ ರೂ.50 ಕ್ಕೆ ಏರಿಕೆ , 2017 ರಲ್ಲಿ ಪ್ರತಿ‌ ಬಸ್ಸಿಗೆ ರೂ.100 ಕ್ಕೆ ಏರಿಕೆ  ‌ಮಾಡಲಾಗಿತ್ತು

Home add -Advt

ರೂ.100 ಪ್ರತಿ‌ ಬಸ್ಸಿಗೆ ನೀಡುವ ಮೊತ್ತವು 2023 ರವರೆಗೂ ರೂ.100 ಆಗಿತ್ತು. 2024 ಅಂದರೆ ಪ್ರಸಕ್ತ ವರ್ಷದಲ್ಲಿ ಆಯುಧಪೂಜೆಗೆ ಪ್ರತಿ‌ ಬಸ್ಸಿಗೆ ಈಗ ನೀಡಲಾಗುತ್ತಿರುವ ರೂ.100 ಅನ್ನು ರೂ.250 ಕ್ಕೆ ಹೆಚ್ಚಿಸಲು ಸಾರಿಗೆ ಹಾಗೂ ಮುಜರಾಯಿ ಸಚಿವರು ಆದೇಶಿಸಿದ್ದಾರೆ. ಅದರಂತೆ ಪರಿಷ್ಕೃತ ಆದೇಶ‌ ಹೊರಡಿಸಲಾಗಿದೆ.

Related Articles

Back to top button