*KSRTC 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ*
ಪ್ರಗತಿವಾಹಿನಿ ಸುದ್ದಿ: ದೂರದೂರುಗಳಿಗೆ ತೆರಳುವ ಮಹಿಳಾ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಕೆ.ಎಸ್.ಆರ್.ಟಿ.ಸಿಯ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಗಳ ಮೇಲೆ ಕೆ.ಎಸ್.ಆರ್.ಟಿ.ಸಿ 100 ಅಶ್ವಮೇಧ ಕ್ಲಾಸಿಕ್ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮ ಲಿಂಗಾರೆಡ್ಡಿ ಹಸಿರು ನಿಶಾನೆ ತೋರಿದರು.
ಕೆ.ಎಸ್.ಆರ್.ಟಿ.ಸಿ ಅಶ್ವಮೇಧ ಕ್ಲಾಸಿಕ್ ಬಸ್ ಗಳು ರಾಜ್ಯ ರಾಜಧಾನಿ ಬೆಂಗಳೂರಿನಿಂದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ತೆರಳಲಿವೆ. ಈ ಬಸ್ ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣವಿರಲಿದೆ. ಅಲ್ಲದೇ ಬಸ್ ಗಳಲ್ಲಿ ಮಹಿಳೆಯರ ಸುರಕ್ಷಿತೆಗಾಗಿ ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಚಾರ್ಜಿಂಗ್ ಪಾಯಿಂಟ್, 52 ಬಜೆಟ್ ಆಸನ, ಬಸ್ ಒಳಗೆ ಹಾಗೂ ಹೊರಗೆ ಎಲ್ ಇಡಿ ಮಾರ್ಗ ಫಲಕ ಅಳವಡಿಸಲಾಗಿದೆ.
ಅಶ್ವಮೇಧ ಕ್ಲಾಸಿಕ್ ಬಸ್ ಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಸಾರಿಗೆ ಸಚಿವರ ಜೊತೆ ಬಸ್ ನಲ್ಲಿ ಕುಳಿತು ಪ್ರಯಾಣಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ