Kannada NewsKarnataka NewsLatest

*ಬಸ್ ಚಾಲಕರಿಗೆ ಹೊಸ ನಿಯಮ ಜಾರಿ*: *ರೂಲ್ಸ್ ಉಲ್ಲಂಘಿಸಿದರೆ ಭಾರಿ ದಂಡ*

ಪ್ರಗತಿವಾಹಿನಿ ಸುದ್ದಿ: ಎಲ್ಲಾ ಸಾರಿಗೆ ಬಸ್ ಚಾಲಕರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್ ಡಬ್ಲ್ಯೂ ಕೆ ಎಸ್ ಆರ್ ಟಿ ಸಿ, ಕೆಕೆ ಆರ್ ಟಿಸಿ ಸೇರಿದಂತೆ ಎಲ್ಲಾ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ.

ರಸ್ತೆ ಸುರಕ್ಷತಾ ನಿಯಮಗಳ ಪ್ರಕಾರ, ವಾಣಿಜ್ಯ ವಾಹನಗಳು ಮತ್ತು ಬಸ್ ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ಇಂತದ್ದೊಂದು ನಿಯಮವನ್ನು ಸಾರಿಗೆ ಇಲಾಖೆ ಜಾರಿಗೆ ತಂದಿದೆ.

ನಗರದ ಸಿಗ್ನಲ್‌ಗಳಲ್ಲಿ ಅಳವಡಿಸಿರುವ ಎಐ ಕ್ಯಾಮೆರಾಗಳು ಮತ್ತು ಸಂಚಾರ ಪೊಲೀಸರು ಸೀಟ್ ಬೆಲ್ಟ್ ಧರಿಸದ ಚಾಲಕರನ್ನ ಪತ್ತೆ ಮಾಡಿ ದಂಡ ವಿಧಿಸುತ್ತಿದ್ದಾರೆ.

ಈಗಾಗಲೇ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾಗಿದೆ. ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ನಿಯಮ ಜಾರಿಗೆ ಬಂದಿದೆ. ನಗರದ ಕೆಎ 57, ಎಫ್ 6558 ಬಸ್‌ನ ಚಾಲಕನಿಗೆ ಸೀಟ್ ಬೆಲ್ಟ್ ಹಾಕದೇ ಇದ್ದಿದ್ದಕ್ಕೆ ವಿಧಾನಸೌಧ ಮೆಟ್ರೋ ನಿಲ್ದಾಣದ ಬಳಿ 500 ರೂಪಾಯಿ ದಂಡವನ್ನ ಹಾಕಲಾಗಿದೆ. ಆದರೆ ಬಹಳಷ್ಟು ಬಿಎಂಟಿಸಿ ಚಾಲಕರು ಸೀಟ್ ಬೆಲ್ಟ್ ಹಾಕ್ತಿಲ್ಲ ಎಂಬ ಆರೋಪವೂ ಕೇಳಿಬರ್ತಿದೆ. ಮತ್ತೊಂದೆಡೆ ಬಸ್‌ಗಳಲ್ಲಿ ಕೆಲ ಬಸ್‌ಗಳಲ್ಲಿ ಸೀಟ್ ಬೆಲ್ಟ್ ಸರಿಯಾಗಿ ವರ್ಕ್ ಆಗುತ್ತಿಲ್ಲ ಎಂದು ಆರೋಪಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button