ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಾಕ್ ಡೌನ್ ಆದಾಗಿನಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಂಡಿದೆ. ಇಂದಿನಿಂದ ನಾಲ್ಕನೇ ಹಂತದ ಲಾಕ್ ಡೌನ್ ಆರಂಭವಾಗಿರುವುದರಿಂದ ಬಸ್ ಸಂಚಾರ ಸೇವೆಗೆ ಸಜ್ಜಾಗಿವೆ. ಆದರೆ ರಾಜ್ಯ ಸರ್ಕಾರದ ಅನುಮತಿಗಾಗಿ ಸಾರಿಗೆ ಸಂಸ್ಥೆಗಳು ಕಾಯುತ್ತಿವೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವರ ಸಭೆ ನಡೆದಿದ್ದು, ಬಸ್ ಸಂಚಾರ ಆರಂಭಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಅಂತರಾಜ್ಯ ಬಸ್ ಸಂಚಾರ ಮಾಡುವುದು ಯವುದೇ ಕಾರಣಕ್ಕೂ ಬೇಡ. ಆದರೆ ಕಂಟೇನ್ಮೆಂಟ್ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ಜಿಲ್ಲಾವಾರು ಬಸ್ ಸಂಚಾರಕ್ಕೆ ಅವಕಾಶ ನೀಡಬಹುದು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಬಸ್ ನಲ್ಲಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಬಿಡಲು ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೇ 30 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಬೇಕು. ಪ್ರಯಾಣಿಕರು, ಬಸ್ ಡ್ರೈವರ್, ಬಸ್ ಕಂಡಕ್ಟರ್ ಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದ್ದಾರೆ.
ಮೇ 31ರವರೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಸಾಧ್ಯವಿಲ್ಲ. ಮೇ ಅಂತ್ಯದವರೆಗೂ ಬಿಎಂಟಿಸಿ ಬಸ್ ಸಂಚಾರ ಬೇಡ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಸಲಹೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ