Kannada NewsKarnataka NewsLatest

*KSRTC ಬಸ್ ಕಂಡಕ್ಟರ್ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪಕುಂಟೆ ಗ್ರಾಮದಲ್ಲಿ ನಡೆದಿದೆ.

50 ವರ್ಷದ ಸೋಮಚಾರಿ ಮೃತ ದುರ್ದೈವಿ. ಮೇಲಾಧಿಕಾರಿಯಿಂದ ಕಿರುಕುಳ ಎಂದು ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತಿಚೆಗೆ ಸೋಮಚಾರಿ ಪೆರಾಲಿಸಿಸ್ ಕಾಯಿಲೆಯಿಂದ ಬಳಲಿದ್ದರು.

ಶ್ರೀನಿವಾಸಪುರ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ, ಇಂದು ತಮ್ಮ ತೋಟದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button