
ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಕಂ ನಿರ್ವಾಹಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆಯ ಬೀಳಗಿಯಲ್ಲಿ ನಡೆದಿದೆ.
ಶ್ರೀಶೈಲ್ ವಿಭೂತಿ (45) ಆತ್ಮಹತ್ಯೆಗೆ ಶರಣಾದವರು. ಬೀಳಗಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರನಾಗಿದ್ದಾರೆ ಎಂಬ ಆರೋಪ ಕೇಲಿಬಂದಿದೆ.
ಬೀಳಗಿ ಡೊಪೋ ಮ್ಯಾನೇಜರ್ ಹಾಗೂ ಜಿಲ್ಲಾ ಕಂಟ್ರೋಲರ್ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಶ್ರೀಶೈಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೀಳಗಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ