ಪ್ರಗತಿವಾಹಿನಿ ಸುದ್ದಿ; ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಸ್ ಟಿಕೆಟ್ ದರ ಏರಿಕೆ ಮಾಡಬೇಕು ಎಂದು ನಿಗಮಗಳಿಂದ ಪ್ರಸ್ತಾವನೆ ಬಂದಿದೆ. ಆದರೆ ಕೋವಿಡ್, ಲಾಕ್ ಡೌನ್ ನಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೆ.ಎಸ್.ಆರ್.ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿದರೆ ಇನ್ನಷ್ಟು ತೊಂದರೆಗೆ ಸಿಲುಕುತ್ತಾರೆ ಹೀಗಾಗಿ ಸಧ್ಯಕ್ಕೆ ಟಿಕೆಟ್ ದರ ಹೆಚ್ಚಿಸಲ್ಲ ಎಂದರು.
ಇನ್ನು ಸಾರಿಗೆ ಸಿಬ್ಬಂದಿ ವೇತನ ಹೆಚ್ಚಳ ವಿಚಾರವಾಗಿ, ಕೊರೊನಾದಿಂದಾಗಿ ಸಾರಿಗೆ ನಿಗಮ ನಷ್ಟದಲ್ಲಿದೆ. ತಕ್ಷಣಕ್ಕೆ ವೇತನ ಹೆಚ್ಚಳ ಸಾಧ್ಯವಿಲ್ಲ. ಈಗಾಗಲೇ ಸಿಬ್ಬಂದಿಗಳ ಹಲವು ಬೇಡಿಕೆ ಈಡೇರಿಸಲಾಗಿದೆ ಎಂದು ಹೇಳಿದರು.
ಗುರುವಾರ ಕೇಂದ್ರ ಸಚಿವ ಸಂಪುಟ ಪುನಾರಚನೆ
ಎಸ್.ಎಸ್.ಎಲ್.ಸಿ ಪರೀಕ್ಷೆ: ಶಿಕ್ಷಕರಿಗೆ ಲಸಿಕೆ ಅಭಿಯಾನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ