ಬಸ್ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ
ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಬಸ್ ಪ್ರಯಾಣ ದರ ಶೀಘ್ರವೇ ಏರಿಕೆಯಾಗಲಿದೆ.
ಬಸ್ ಪ್ರಯಣ ದರ ಏರಿಸುವಂತೆ ಕೆ.ಎಸ್.ಆರ್.ಟಿ.ಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಬಸ್ ಟಿಕೆಟ್ ದರ ಶೇ.15ರಿಂದ ಶೇ.20ರಷ್ಟು ಏರಿಸಲು ಮನವಿ ಮಡಲಾಗಿದೆ.
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, ಬಸ್ ಪ್ರಯಾಣದರ ಏರಿಸಲು ಪ್ರಸ್ತಾವನೆ ಬಂದಿದೆ. ಆದರೆ ನಾವಿನ್ನು ಪರಿಶೀಲಿಸಿಲ್ಲ ಎಂದಿದ್ದಾರೆ. ಸದ್ಯಕ್ಕೆ ಯಾವುದೇ ನಿರ್ಧರ ಕೈಗೊಳ್ಳಲಾಗಿಲ್ಲ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ