Latest

KSRTC ಬಸ್- ಕಾರು ಭೀಕರ ಅಪಘಾತ; ಐವರ ಸ್ಥಿತಿ ಗಂಭೀರ

ಪ್ರಗತಿವಾಹಿನಿ ಸುದ್ದಿ; ಕಾಗವಾಡ ; ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಗವಾಡ ತಾಲೂಕಿನ ಉಗಾರ್ ಗ್ರಾಮದಲ್ಲಿ ನಡೆದಿದೆ.

ಮೀರಜ್ – ಜಮಖಂಡಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ.

ಕಾರಿನಲ್ಲಿದ್ದವರು ಕೊಲ್ಲಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button