Kannada NewsKarnataka NewsLatest

*ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಕೆ.ಎಸ್.ಆರ್.ಟಿ.ಸಿ ಡಿಸಿ*

ಪ್ರಗತಿವಾಹಿನಿ ಸುದ್ದಿ: ಬಸ್ ಚಾಲಕನಿಂದ ಲಂಚ ಪಡೆಯುತ್ತಿದ್ದ ವೇಳೆ ಕೆ.ಎಸ್.ಆರ್.ಟಿ.ಸಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಬಸವರಾಜು ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ವಿಭಾಗ ನಿಯಂತ್ರಣಾಧಿಕಾರಿ. ಬಸ್ ಚಾಲಕನಿಂದ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

Home add -Advt

ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಬಸವರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಚಾಲಕ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದೀಗ ಚಾಲಕನಿಂದ ಲಂಚದ ಹಣ ಪಡೆಯುತ್ತಿದ್ದಾಗಲೇ ನಿಖರ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಸವರಾಜುನನ್ನು ವಶಕ್ಕೆ ಪಡೆದಿದ್ದಾರೆ.


Related Articles

Back to top button