ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಕೆಎಸ್‍ಆರ್ ಟಿಸಿ ಚಾಲನೆ ನೀಡಿದೆ.
ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ್ ತಾವೇ ಸ್ಯಾನಿಟೈಸರ್ ಸ್ಪ್ರೇಗೆ ಒಳಗಾಗುವ ಮೂಲಕ ಈ ಬಸ್ ಗೆ ಚಾಲನೆ ನೀಡಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಸ್ಯಾನಿಟೈಸರ್ ಬಸ್ ಸಂಚರಿಸಲಿದೆ. ಹತ್ತು ವರ್ಷದ ಹಳೆಯ ಬಸ್‍ಅನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಿದ ಕೆಎಸ್‍ಆರ್‍ಟಿಸಿ , ಸುಮಾರು 20 ಸಾವಿರ ವೆಚ್ಚದಲ್ಲಿ ಅನುಪಯುಕ್ತ ಬಸ್‍ಅನ್ನು ಪುನರ್ ನಿರ್ಮಿಸಲಾಗಿದೆ.
ಮುಂದಿನ ದಿನಗಳಲ್ಲಿ ಇತರೆ ಜಿಲ್ಲೆಗಳ ಡಿಪೋಗಳಲ್ಲಿ ಸ್ಕ್ರ್ಯಾಪ್ ಬಸ್‍ಗಳನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಲಾಗುವುದು. ಬಸ್ ಮುಂಭಾಗ ಹತ್ತಿ ಹಿಂಭಾಗ ಇಳಿದರೆ ಸಂಪೂರ್ಣವಾಗಿ ದೇಹಕ್ಕೆ ವೈರಾಣು ನಿರೋಧಕ ದ್ರಾವಣ ಸಿಂಪಡಣೆ ಆಗಲಿದೆ. ಈ ಮೂಲಕ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿಯಿಂದ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ