ಉಚಿತ ಬಸ್ ವ್ಯವಸ್ಥೆ ಮತ್ತೆ ಎರಡು ದಿನ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಲಸೆ ಕಾರ್ಮಿಕರಿಗೆ ಮೂರು ದಿನಗಳ ಕಾಲ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದ್ದ ರಾಜ್ಯ ಸಾರ್ಕಾರ ಇದೀಗ ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಿ ಆದೇಶ ನೀಡಿದೆ.

ಕೆಎಸ್‌ಆರ್‌ಟಿಸಿ, ಕಾರ್ಮಿಕರಿಂದ ದುಪ್ಪಟ್ಟು ಹಣವನ್ನು ಪಡೆಯುತ್ತಿದ್ದ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ರಾಜ್ಯ ಸರ್ಕಾರ, ಕಾರ್ಮಿಕರಿಗೆ ಮೂರು ದಿನಗಳ ಕಾಲ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿತ್ತು. ಇದೀಗ ಊರಿಗೆ ತೆರಳುವ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಒಟ್ಟು 5 ದಿನಗಳ ಕಾಲ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿದೆ.

ಈ ಕುರಿತು ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರಕಟಣೆ ಹೊರಡಿಸಿದ್ದು, ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಇನ್ನೂ ಎರಡು ದಿನಗಳ ಕಾಲ ವಿಸ್ತರಿಸಲಾಗಿದೆ. ಮಂಗಳವಾರ ಈ ಸೌಲಭ್ಯ ಕೊನೆಗೊಳ್ಳುತ್ತಿತ್ತು. ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಕಾರ್ಮಿಕರು ಮತ್ತು ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button