Latest

ಪ್ರಯಾಣಿಕರಿಗೆ ಸಿಹಿ ಸುದ್ದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುಗಾದಿ ಹಬ್ಬಕ್ಕೆ ಪ್ರಯಾಣಿಕರಿಗೆ ಕೆ.ಎಸ್.ಆರ್.ಟಿ.ಸಿ ವತಿಯಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 600 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಆನ್ ಲೈನ್ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಬಹುದು.

4ಕ್ಕಿಂತ ಹೆಚ್ಚು ಜನರು ಒಟ್ಟಾಗಿ ಟಿಕೆಟ್ ಬುಕ್ ಮಾಡಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೇ ಹೋಗುವ ಹಾಗೂ ಬರುವ ಟಿಕೆಟ್ ಮುಂಗಡವಾಗಿ ಕಾಯ್ದಿರಿಸಿದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಕೋವಿಡ್ ಮಾರ್ಗಸೂಚಿಯನ್ನು ಪ್ರಯಾಣಿಕರು ಪಾಲಿಸಬೇಕು ಎಂದು ಕೆ.ಎಸ್.ಆರ್.ಟಿ.ಸಿ ತಿಳಿಸಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ವಿದ್ಯಾರ್ಥಿ ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button